ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಶುಕ್ರವಾರ, 26 ನವೆಂಬರ್ 2021 (08:33 IST)
ಬೆಂಗಳೂರು: ಇಂದಿನ
ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಮೇಲಿನ ಅತಿಯಾದ ನಿರೀಕ್ಷೆ ನಿಮಗೆ ಹೊರೆ ಎನಿಸೀತು. ಅಗತ್ಯಕ್ಕೆ ತಕ್ಕಂತೆ ಖರ್ಚು ವೆಚ್ಚ ಮಾಡುವುದನ್ನು ಕಲಿಯಬೇಕು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ. ತಾಳ್ಮೆಯಿರಲಿ.

ವೃಷಭ: ಮನೆಯ ಕೆಲವೊಂದು ವಿಚಾರದಲ್ಲಿ ಬದಲಾವಣೆ ತರಲು ಪ್ರಯತ್ನ ನಡೆಸಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.


ಮಿಥುನ: ಹೊಸ ಪ್ರೀತಿ, ಸಂಬಂಧಗಳು ನಿಮ್ಮ ಮನಸ್ಸಿಗೆ ಹೊಸ ಉಲ್ಲಾಸ ತಂದುಕೊಡಲಿದೆ. ಬೇರೆಯವರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.


ಕರ್ಕಟಕ: ನಿಮ್ಮ ಕೆಲಸ ಕಾರ್ಯಗಳಲ್ಲಿ ಇತರರ ಸಹಾಯ ನಿರೀಕ್ಷೆ ಮಾಡಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಕುಲದೇವರ ಪ್ರಾರ್ಥನೆ ಮಾಡಿ.

ಸಿಂಹ: ಎಷ್ಟೇ ಅನ್ಯೋನ್ಯತೆಯಿದ್ದರೂ ಹಣಕಾಸಿನ ವಿಚಾರದಲ್ಲಿ ಸ್ನೇಹಿತರೊಂದಿಗೆ ವೈಮನಸ್ಯಗಳಾಗುವ ಸಾಧ್ಯತೆಗಳಿವೆ. ದಾಯಾದಿ ಕಲಹಗಳ ಪರಿಹಾರಕ್ಕೆ ಹಿರಿಯರ ಸಲಹೆ ಪಡೆಯಿರಿ. ಕಿರು ಸಂಚಾರ ಮಾಡಲಿದ್ದೀರಿ.


ಕನ್ಯಾ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗುವ ಸಾಧ್ಯತೆಯಿದೆ. ವ್ಯಾಪಾರೀ ವರ್ಗದವರಿಗೆ ನಿವ್ವಳ ಲಾಭ ಸಿಗಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಮುಂಬಡ್ತಿ ಪಡೆಯುವ ಅವಕಾಶ ಲಭಿಸಲಿದೆ.


ತುಲಾ: ಮಹಿಳೆಯರಿಗೆ ಮನೆ ನಿರ್ವಹಣೆ ವಿಚಾರದಲ್ಲಿ ತೊಂದರೆಗಳು ಎದುರಾದೀತು. ಇಷ್ಟಾರ್ಥ ಪೂರೈಕೆಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಉದ್ಯೋಗಸ್ಥರಿಗೆ ಸ್ಥಾನ ಪಲ್ಲಟ ಸಾಧ್ಯತೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ನಿಮ್ಮ ಮನಸ್ಸಿನಲ್ಲಿರುವ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದ್ದೀರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಸೆಯಾದೀತು. ಸ್ವಯಂ ವೃತ್ತಿಯವರಿಗೆ ಮುನ್ನಡೆ.


ಧನು: ಭೂಮಿ, ವಾಹನ ಖರೀದಿ ವ್ಯವಹಾರಗಳಲ್ಲಿ ಮುನ್ನಡೆ ತೋರಿಬರಲಿದೆ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಸುಧಾರಣೆ ಕಂಡುಬರಲಿದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗ.


ಮಕರ: ವೃತ್ತಿರಂಗದಲ್ಲಿ ನಿಮ್ಮ ಬೇಜವಾಬ್ಧಾರಿತನದಿಂದ ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಬಂದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪ್ರೀತಿ ಪಾತ್ರರಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.


ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರಲಿದ್ದು, ಹಣಕಾಸಿನ ಸ್ಥಿತಿಗತಿಯಲ್ಲಿ ಸುಧಾರಣೆಯಾಗುವುದು.


ಇದರಲ್ಲಿ ಇನ್ನಷ್ಟು ಓದಿ :