ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನ ನಿಮಿತ್ತ ಪ್ರವಾಸ ಮಾಡುವ ಯೋಗ. ಉದ್ಯೋಗ ವ್ಯವಹಾರದಲ್ಲಿ ಸಮಯಕ್ಕೆ ತಕ್ಕ ನಿರ್ಧಾರ ತೆಗೆದುಕೊಳ್ಳುವುದರಿಂದ ಲಾಭವಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ವೃಷಭ: ಸಮಯಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯಗಳಿಂದ ಪಾರಾಗಲಿದ್ದೀರಿ. ಆತ್ಮೀಯರೊಂದಿಗೆ ಕಾಲ ಕಳೆಯುವ ಯೋಗ ನಿಮ್ಮದಾಗಲಿದೆ. ಕಾರ್ಯನಿಮಿತ್ತ ಓಡಾಟ ನಡೆಸುವಿರಿ.ಮಿಥುನ: ಆರ್ಥಿಕವಾಗಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಕೈ ತುಂಬಾ ಕೆಲಸವಿರಲಿದ್ದು, ದುಡಿಮೆಗೆ