ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ನಿಮ್ಮ ವ್ಯವಹಾರದಲ್ಲಿ ಪಾರದರ್ಶಕತೆಯಿದ್ದರೆ ಯಾವುದಕ್ಕೂ ಹೆದರಬೇಕಾಗಿಲ್ಲ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಯೋಗವಿದೆ.ವೃಷಭ: ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರಿಳಿತ ಆತಂಕಕ್ಕೆ ಕಾರಣವಾದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಒಳಿತಾಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾದೀತು.ಮಿಥುನ: ನಿಮ್ಮ ಸ್ವ ಸಾಮರ್ಥ್ಯದಿಂದ ಒಳ್ಳೆಯ ಫಲವನ್ನೇ ಕಾಣಲಿದ್ದೀರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ