ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಯವಾದ ಮಾತುಗಳಿಂದ ಬೇಳೆ ಬೇಯಿಸಿಕೊಳ್ಳುವವರ ಬಗ್ಗೆ ಎಚ್ಚರಿಕೆಯಿಂದಿರಿ. ಸಾಂಸಾರಿಕವಾಗಿ ತಾಳ್ಮೆಯೇ ನಿಮ್ಮ ಅಸ್ತ್ರವಾಗಬೇಕು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಮನಸ್ಸಿಗೆ ಸಂತೋಷವಾಗಲಿದೆ.ವೃಷಭ: ಕುಟುಂಬ ಸದಸ್ಯರ ಅಭಿಪ್ರಾಯಕ್ಕೆ ಮನ್ನಣೆ ನೀಡಿ ನಿರ್ಧಾರ ತೆಗೆದುಕೊಳ್ಳಿ. ದಾಯಾದಿ ಕಲಹಗಳಿಗೆ ಪರಿಹಾರ ಸಿಗಲಿದೆ. ವೈಯಕ್ತಿಕ ಜೀವನದಲ್ಲಿ ಪ್ರಗತಿ ಕಂಡುಬಂದೀತು. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ಮಿಥುನ: ವಿಶೇಷವಾದ ವ್ಯಕ್ತಿಗಳಿಂದ ನಿಮ್ಮ ಕೆಲಸಕ್ಕೆ ಅನುಕೂಲವಾಗಲಿದೆ. ಹೊಸದಾಗಿ ಉದ್ದಿಮೆ