ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳು ಕಂಡುಬರಲಿದೆ.ವೃಷಭ: ವೃತ್ತಿರಂಗದಲ್ಲಿ ಹೆಚ್ಚಿನ ಸ್ಥಾನ ಮಾನ ಸಿಗಲಿದೆ. ಆದರೆ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕು. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದಾರೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.