ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅರ್ಥಹೀನವಾಗಿ ವಾಗ್ವಾದ ನಡೆಸುವುದಕ್ಕಿಂತ ಮೌನವಾಗಿರುವುದೇ ಲೇಸು ಎಂದು ಅರ್ಥಮಾಡಿಕೊಳ್ಳಲಿದ್ದೀರಿ. ನಿಮ್ಮ ಕೆಲಸಕ್ಕೆ ತಕ್ಕ ಬೆಲೆ ಸಿಕ್ಕೇ ಸಿಗುತ್ತದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಹೋದ್ಯೋಗಿಗಳೂ ಅಚ್ಚರಿಪಡುವಂತೆ ಸಾಧನೆ ಮಾಡಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಆದಾಯ ಹೆಚ್ಚಿಸುವ ಚಿಂತೆ ಕಾಡಲಿದೆ. ದೂರ ಪ್ರಯಾಣಗಳನ್ನು ರದ್ದುಗೊಳಿಸಲಿದ್ದೀರಿ.ಮಿಥುನ: ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸುಗಳನ್ನು ನನಸು ಮಾಡಲು ಪ್ರಯತ್ನಿಸಲಿದ್ದೀರಿ. ದೇಹಾರೋಗ್ಯದಲ್ಲಿ