ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು.ವೃಷಭ: ಬೇಡದ ವಿಚಾರಗಳ ಅನಗತ್ಯ ತಲೆಕೆಡಿಸಿಕೊಂಡು ತಾಳ್ಮೆ ಕಳೆದುಕೊಳ್ಳುವ ಘಟನೆಗಳು ನಡೆದೀತು. ಮಹಿಳೆಯರಿಗೆ ಅಡುಗೆ ಮನೆಯಲ್ಲಿ ಸಣ್ಣಪುಟ್ಟ ತೊಂದರೆಗಳಾದೀತು. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ.ಮಿಥುನ: ನೂತನ ಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತೋಷವಾಗುವುದು. ವ್ಯವಹಾರಗಳಲ್ಲಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಬಂಧು