ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಮೂಡಲಿದೆ. ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷಕ್ಕೆ ದಾರಿ ಮಾಡಿಕೊಡಬೇಡಿ. ಹಿರಿಯರ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.ಮಿಥುನ: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ.