ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲಸ ಕಾರ್ಯಗಳಲ್ಲಿ ಚುರುಕಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಶಿಸಿ. ದೇಹಾರೋಗ್ಯದ ಹೊಸ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ.ವೃಷಭ: ನಿಮ್ಮ ಸುತ್ತಮುತ್ತಲಿದ್ದವರಿಂದಲೇ ವಂಚನೆಗೊಳಗಾಗುವ ಅಪಾಯವಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ಪ್ರೇಮಿಗಳಿಗೆ ವಿರಹ ವೇದನೆ ಕಂಡುಬಂದೀತು. ತಾಳ್ಮೆಯಿರಲಿ.ಮಿಥುನ: ನೀವು ಬಯಸಿದ್ದು ಒಂದು ಆಗುವುದು ಇನ್ನೊಂದು ಎನ್ನುವ ಪರಿಸ್ಥಿತಿ ಎದುರಾಗಲಿದೆ. ವ್ಯಾವಹಾರಿಕವಾಗಿ ಲಾಭ ಮಾಡಿಕೊಳ್ಳಲು ನಾನಾ ದಾರಿಗಳು ಕಂಡುಬರಲಿದೆ.