ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಶ್ಶಾಂತಿಗಾಗಿ ಹುಡುಕಾಡುವಂತಹ ಪರಿಸ್ಥಿತಿ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಮಾತಿನ ಮೇಲೆ ಸಂಯಮವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಮನಸ್ಸು ಹಾತೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವೃತ್ತಿರಂಗದಲ್ಲಿ ಅನುಕೂಲಕರ ವಾತಾವರಣ ಕಂಡುಬರಲಿದೆ. ಸಹೋದ್ಯೋಗಿಗಳ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.ಮಿಥುನ: ದೇವತಾನುಗ್ರಹದಿಂದ ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ನೂತನ-ಬಂಧು ಮಿತ್ರರ ಸಮಾಗಮವಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ.