ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯ ವಿಚಾರದಲ್ಲಿ ಉಪೇಕ್ಷೆ ಬೇಡ. ಸಂಗಾತಿಯ ಕೆಲವೊಂದು ಮಾತುಗಳನ್ನು ಅಲ್ಲಗಳೆಯಲಾಗದು. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮಕ್ಕಳಿಗೆ ಅನಿರಿಕ್ಷಿತ ಉಡುಗೊರೆ ನೀಡಲಿದ್ದೀರಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಮುನ್ನಡೆ ಕಾಣಲಿದ್ದೀರಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಕ್ರಿಯಾತ್ಮಕ