ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಯೋಜನೆಗಳನ್ನು ಹಮ್ಮಿಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸಣ್ಣ ವ್ಯತ್ಯಯವಾದೀತು. ಆದರೆ ಉಪೇಕ್ಷೆ ಬೇಡ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಮಾತೃಸಮಾನರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಹಕಾರ ಸಿಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾದೀತು. ತಾಳ್ಮೆ, ಸಂಯಮ ಅಗತ್ಯ.ಮಿಥುನ: ನೀವು ನಿರೀಕ್ಷೆಯೇ ಮಾಡಿರದ ಘಟನೆಗಳು, ವಿಚಾರಘಳು