ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಏರುಪೇರುಗಳು ಸಾಮಾನ್ಯ. ಕೌಟುಂಬಿಕವಾಗಿ ಸರಿಯಾದ ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಎದುರಾದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.ವೃಷಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನಮಾನಕ್ಕಾಗಿ ನಿಮ್ಮ ಪ್ರಯತ್ನ ನಡೆಸಲಿದ್ದೀರಿ. ಕುಲದೇವರ ಪ್ರಾರ್ಥನೆ ನಡೆಸಿ ಮುನ್ನಡೆದರೆ ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಬೆಳಗಿನ ಜಾವ ಕಂಡ ಸ್ವಪ್ನ ನಿಮ್ಮನ್ನು ಚಿಂತೆಗೀಡು