ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಳೆಯ ಮಿತ್ರರ ಸಮಾಗಮವಾಗಲಿದ್ದು, ಮನಸ್ಸಿಗೆ ಖುಷಿಯಾಗಲಿದೆ. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ತಾಳ್ಮೆಯಿರಲಿ.ವೃಷಭ: ನಿರೀಕ್ಷಿತ ಸ್ಥಾನ ಮಾನ ಸಿಗದೇ ನಿರಾಸೆಯಾದೀತು. ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬಂದೀತು. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.ಮಿಥುನ: ಕೃಷಿ ವ್ಯವಹಾರಗಳಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆಯ ಯೋಗ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿ ಹೆಗಲಿಗೇರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ