ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆಹಾರ ಬದಲಾವಣೆಯಿಂದಾಗಿ ಆರೋಗ್ಯದಲ್ಲಿ ಏರುಪೇರಾದೀತು. ಕಾಳಜಿಯಿರಲಿ. ಹಿರಿಯರಿಗೆ ನೀವು ಮಾಡುವ ಕೆಲಸಗಳು ಸಂತೋಷ ಕೊಡಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ.ವೃಷಭ: ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬನೆ ಬೇಡ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ದಿನದಂತ್ಯಕ್ಕೆ ನೆಮ್ಮದಿ ಕಂಡುಬರಲಿದೆ.ಮಿಥುನ: ಇನ್ನೊಬ್ಬರು ಮಾಡುವ ತಪ್ಪುಗಳಿಗೆ ನೀವು ಹೊಣೆ ಹೊರಬೇಕಾದ