ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ ಸಿಗುವುದು. ಬಹಳ ದಿನಗಳಿಂದ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ.ವೃಷಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕಾಗಿ ಅವಿರತ ಪ್ರಯತ್ನ ನಡೆಸಲಿದ್ದೀರಿ. ನಿಮಗೆ ಅಡ್ಡಗಾಲಾಗುತ್ತಿರುವವರಿಂದ ಮುಕ್ತಿ ಪಡೆಯಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಉನ್ನತಿಯ ಯೋಗವಿದೆ. ಕಿರು ಸಂಚಾರ ಮಾಡುವಿರಿ.ಮಿಥುನ: ಆಸ್ತಿ ವಿಚಾರದಲ್ಲಿ ನಿಮ್ಮ ಪರಿಶ್ರಮದಿಂದ ಮುನ್ನಡೆ ಸಿಗಲಿದೆ. ಧಾರ್ಮಿಕ