ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿದರೆ ಯಾವುದೇ ಸಮಸ್ಯೆಯಾಗದು. ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ. ಆದರೆ ಭವಿಷ್ಯದ ಬಗ್ಗೆ ಚಿಂತೆ ಕಾಡೀತು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ವೃಷಭ: ಉದ್ಯೋಗದಲ್ಲಿ ಅಧಿಕ ಶ್ರಮದಿಂದಾಗಿ ದೇಹಾಯಾಸವಾದೀತು. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಕಂಡುಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಉನ್ನತಿಯ ಯೋಗವಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.ಮಿಥುನ: ವೃತ್ತಿರಂಗದಲ್ಲಿ ನಿಮಗೆ ಅಡೆತಡೆಯಾಗಿದ್ದ ವಿಚಾರಗಳು ನಿವಾರಣೆಯಾಗಲಿವೆ. ನಿರುದ್ಯೋಗಿಗಳಿಗೆ ಬಯಸಿದ