ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಾಡಬೇಕಾದ ಕೆಲಸ ಪೂರ್ತಿಯಾಗದೇ ಮನಸ್ಸಿಗೆ ನೆಮ್ಮದಿಯಿರದು. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪ್ರೀತಿ ಪಾತ್ರರನ್ನು ಭೇಟಿಯಾಗಲಿದ್ದೀರಿ.ವೃಷಭ: ನೀವು ಇಷ್ಟಪಡುವ ವ್ಯಕ್ತಿಗಳು ಜೊತೆಗೇ ಇದ್ದರೂ ಋಣಾತ್ಮಕ ಚಿಂತೆಗಳು ಘಾಸಿಗೊಳಿಸಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ.ಮಿಥುನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗವಿದೆ. ಬೇರೆಯವರ