ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಸಂಬಂಧವಾದ ಸಮಸ್ಯೆಗಳಿಂದ ಪರಿಹಾರ ಪಡೆಯಲು ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಶತ್ರು ಪೀಡೆ ನಾಶವಾದೀತು. ಸಾಂಸಾರಿಕವಾಗಿ ಮಾತಿನ ಮೇಲೆ ನಿಗಾ ಇರಲಿ. ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ.ವೃಷಭ: ನಿಮ್ಮ ಮಾತಿನಿಂದ ಇತರರಿಗೆ ನೋವಾಗದಂತೆ ಎಚ್ಚರಿಕೆ ವಹಿಸಬೇಕು. ಆರ್ಥಿಕವಾಗಿ ಉನ್ನತ ಸ್ಥಾನ ಮಾನ ಯೋಗವಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ತಾಳ್ಮೆಯಿರಲಿ.ಮಿಥುನ: ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ.