ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗವಿದ್ದು, ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಯೋಗ್ಯ ವಯಸ್ಕರಿಗೆ ವಿವಾಹ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು.ವೃಷಭ: ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.ಮಿಥುನ: ಹೊಸದಾಗಿ ವೃತ್ತಿಜೀವನ ಆರಂಭಿಸಿದವರಿಗೆ ಮುನ್ನಡೆಯ ಯೋಗ. ಹಣಕಾಸಿನ ಗಳಿಕೆಗೆ ನಾನಾ ದಾರಿಗಳು