ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದಿಡೀರ್ ಆಗಿ ಎದುರಾಗುವ ಸಮಸ್ಯೆಗಳಿಂದ ಸಂಕಷ್ಟಕ್ಕೀಡಾಗಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು.ವೃಷಭ: ಇಷ್ಟ ದೇವತೆಗಳ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈಗೊಳ್ಳಲಿರುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ.ಮಿಥುನ: ವೃತ್ತಿರಂಗದಲ್ಲಿ ನಿಮಗೆ ಆಗಿಬರದಂತವರಿಂದ ತೊಂದರೆಗಳು ಎದುರಾದೀತು. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಾಗುವ