ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕೈ ತುಂಬಾ ಅವಕಾಶಗಳಿದ್ದರೂ ಉದ್ಯೋಗ ಕ್ಷೇತ್ರದಲ್ಲಿ ಆಲಸ್ಯತನದಿಂದ ಹಿಂದೆ ಬೀಳಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ವೃಷಭ: ವ್ಯಾಪಾರಿಗಳಿಗೆ ಅನುಕೂಲವಾಗಲಿದ್ದು, ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಾರ್ಯನಿಮಿತ್ತ ದೂರ ಪ್ರಯಾಣ ಮಾಡಬೇಕಾಗುತ್ತದೆ.ಮಿಥುನ: ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ.