ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಮಾಜಿಕವಾಗಿ ಉತ್ತಮ ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಮನೆ ರಿಪೇರಿ ಕೆಲಸಗಳಿಗಾಗಿ ಕೊಂಚ ಓಡಾಟ ನಡೆಸಬೇಕಾದೀತು.ವೃಷಭ: ಅನಗತ್ಯವಾಗಿ ಮೂರನೇ ವ್ಯಕ್ತಿಗಳು ನಿಮ್ಮ ವೈಯಕ್ತಿಕ ಜೀವನದಲ್ಲಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ಮಕ್ಕಳ ವಿಚಾರದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.ಮಿಥುನ: ಮನಸ್ಸಿನಲ್ಲಿ ಅನಗತ್ಯದ ಗೊಂದಲಗಳಿಗೆ ಅವಕಾಶ ಕೊಡಬೇಡಿ. ಭೂಮಿ, ವಾಹನ ಖರೀದಿ ವಿಚಾರದಲ್ಲಿ ಮುನ್ನಡೆ