ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನೆಯಲ್ಲಿ ಧನ ಕನಕ ಅಭಿವೃದ್ಧಿಯಾಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ಪಾಲು ಬಂಡವಾಳ ಹೂಡಿಕೆಯಲ್ಲಿ ಲಾಭ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು.ವೃಷಭ: ವೃತ್ತಿರಂಗದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗುವುದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕ ಮುನ್ನಡೆ. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು.ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ.