ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನೆಯಲ್ಲಿ ಸಣ್ಣ ಪುಟ್ಟ ಮಾರ್ಪಾಡು ಕೆಲಸಗಳನ್ನು ಮಾಡಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದಷ್ಟೇ ಖರ್ಚೂ ಇರಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಶುಭ ವಾರ್ತೆಗಳು ಕೇಳಿಬಂದೀತು. ಚಿಂತೆ ಬೇಡ.ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಮಾನಗಳು ವೃದ್ಧಿಯಾಗಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವಿದ್ಯಾರ್ಥಿಗಳು ಅಧ್ಯಯನ ನಿಮಿತ್ತ ಪ್ರಯಾಣ ಮಾಡಲಿದ್ದಾರೆ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.