ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಚಿಂತಿತ ಕಾರ್ಯಗಳು ಯಥಾವತ್ತಾಗಿ ನಡೆಯಲಿದೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಂಡು ಮುನ್ನಡೆಯಬೇಕಾಗಲಿದೆ. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.ವೃಷಭ: ಆರೋಗ್ಯ ವೃದ್ಧಿಯಾಗಲಿದ್ದು, ಸಾಮಾಜಿಕವಾಗಿ ನಿರೀಕ್ಷಿತ ಸ್ಥಾನ ಮಾನ ನಿಮ್ಮದಾಗಲಿದೆ. ವಿದ್ಯಾರ್ಥಿಗಳು ವಿಷಯಾನ್ವೇಷಣೆಗಾಗಿ ಪ್ರಯತ್ನ ನಡೆಸಲಿದ್ದಾರೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಬೇರೆಯವರು ನಿಮ್ಮ ಬಗ್ಗೆ ಹೇಳುವ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.