ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಕೆಲವೊಂದು ನಡತೆಗಳು ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿವೆ. ಇಷ್ಟಮಿತ್ರರೊಂದಿಗೆ ಪ್ರವಾಸ ಕೈಗೊಳ್ಳುವ ಯೋಗವಿದೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ.ವೃಷಭ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ಮೋಹ ಬೇಡ. ನಿರ್ಧಾರ ಕೈಗೊಳ್ಳುವಾಗ ಸಂದಿಗ್ಧತೆ ಕಾಡಲಿದೆ. ಪರರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಬೇಡಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.ಮಿಥುನ: ಹಿಂದೆ ನಡೆದ ವಿಚಾರಗಳನ್ನು ಮೆಲುಕು ಹಾಕಿಕೊಳ್ಳಲಿದ್ದೀರಿ.