ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ತಾಳ್ಮೆ ಕಾಯ್ದುಕೊಳ್ಳುವುದು ಮುಖ್ಯ. ಮನಸ್ಸಿಗೆ ಹಿಡಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಲಿದೆ.ವೃಷಭ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಯ ಯೋಗವಿದೆ. ಆದರೆ ನಯವಂಚಕರಿಂದ ದೂರವಿದ್ದರೆ ಉತ್ತಮ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ಮಿಥುನ: ಕಾರ್ಯಕ್ಷೇತ್ರದಲ್ಲಿ ಬಿಡುವಿಲ್ಲದ ದುಡಿವಿನಿಂದ ದೇಹಾಯಾಸವಾಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕೌಟುಂಬಿಕವಾಗಿ ಸುಖ