ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರುವುದು. ಮಾನಸಿಕವಾಗಿ ಕೆಲವೊಂದು ವಿಚಾರಗಳು ನಿಮ್ಮನ್ನು ಚಿಂತೆಗೀಡುಮಾಡಲಿವೆ. ಮಕ್ಕಳ ಸುಖ ಸಂತೋಷಕ್ಕಾಗಿ ಪರಿಶ್ರಮ ಪಡಬೇಕಾದೀತು. ತಾಳ್ಮೆಯಿರಲಿ.ವೃಷಭ: ಬಂಧು ಬಳಗದವರಿಂದ ಪರಸ್ಪರ ಸಹಕಾರ ಕಂಡುಬರಲಿದ್ದು, ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಹಿರಿಯರ ಅಭಿಪ್ರಾಯಕ್ಕೆ ಬೆಲೆ ಕೊಡುವುದು ಉತ್ತಮ.