ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕನಸಿನ ಬೆನ್ನೇರಿ ಹೊರಡುವಾಗ ಕೆಲವೊಂದು ಅಡೆತಡೆಗಳು ಸಾಮಾನ್ಯ. ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಸಂದರ್ಭೋಚಿತ ಸಲಹೆಗಳು ನಿಮಗೆ ಕಷ್ಟಕಾಲದಲ್ಲಿ ನೆರವಿಗೆ ಬರಲಿದೆ. ಸಾಂಸಾರಿಕವಾಗಿ ಮಧ್ಯಮ ಸುಖ ಕಂಡುಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಕೌಟುಂಬಿಕವಾಗಿ ಸುಖ ಸಮೃದ್ಧಿ