ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಮತ್ತು ಉನ್ನತ ವ್ಯಾಸಂಗಕ್ಕೆ ಪ್ರಯತ್ನ ಪಡುತ್ತಿರುವವರಿಗೆ ಮುನ್ನಡೆ ಕಂಡುಬರಲಿದೆ. ಉದ್ಯೋಗ ವ್ಯವಹಾರದಲ್ಲಿ ಸಮಯಕ್ಕೆ ಸರಿಯಾಗಿ ಹಣಕಾಸಿನ ಸಹಾಯ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಪಾಲುದಾರಿಕೆ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ಕೈ ತುಂಬಾ ವರಮಾನ ಬರುವಂತಹ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.ಮಿಥುನ: ದಂಪತಿಗಳ ನಡುವೆ ಕ್ಷುಲ್ಲುಕ ಕಾರಣಕ್ಕೆ ಮನಸ್ತಾಪಗಳು ಬರುವ ಸಾಧ್ಯತೆ. ಮಾತಿನ ಮೇಲೆ