ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮಿಂದ ಹಿಂದೆ ಸಹಾಯ ಅಪೇಕ್ಷಿಸಿದವರಿಂದ ಪ್ರತ್ಯುಪಕಾರ ಸಿಗಲಿದೆ. ನಿಮ್ಮ ಗುಟ್ಟುಗಳು ಇತರರ ಮುಂದೆ ಬಯಲಾಗಲಿದೆ. ಆರ್ಥಿಕವಾಗಿ ಬಲವೃದ್ಧಿಯಾಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ.ವೃಷಭ: ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಲೆಕ್ಕಪತ್ರಗಳ ಬಗ್ಗೆ ನಿಗಾ ಅಗತ್ಯ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಮಕ್ಕಳ ವಿಚಾರದಲ್ಲಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಅನಗತ್ಯ ಚಿಂತೆ ಬೇಡ.ಮಿಥುನ: ಸರಿಯಾದ ಯೋಜನೆ ಹಾಕಿಕೊಳ್ಳುವುದರಿಂದ ಸಂಕಷ್ಟಕ್ಕೀಡಾಗುವುದು