ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಸಂಬಂಧವಾದ ಹೊಸ ಜವಾಬ್ಧಾರಿಗಳು ಕಿರಿ ಕಿರಿ ತಂದೀತು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕೆಲವೊಂದು ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.ಮಿಥುನ: ಯೋಗ್ಯ ವಯಸ್ಕರು ಸೂಕ್ತ ಸಂಗಾತಿಗಾಗಿ ಹುಡುಕಾಟ ನಡೆಸಲಿದ್ದಾರೆ. ಹಿರಿಯರೊಂದಿಗೆ ಅನಗತ್ಯ