ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇವತಾನುಗ್ರಹದಿಂದ ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಅಪರೂಪದ ಅತಿಥಿಗಳ ಆಗಮನವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.ವೃಷಭ: ಆಸ್ತಿ ವಿಚಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ನೂತನ ಬಂಧು ಮಿತ್ರರ ಸಮಾಗಮವಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿನ ಅವಕಾಶಗಳು ಲಭಿಸೀತು. ಬಳಸಿಕೊಳ್ಳಿ.ಮಿಥುನ: ವಿದೇಶೀ ಮೂಲಗಳಿಂದ ಧನಾಗಮನವಾಗಲಿದೆ. ಹಿರಿಯರಿಗೆ ತೀರ್ಥ ಕ್ಷೇತ್ರಗಳ ಸಂದರ್ಶನ ಯೋಗ ಕಂಡುಬರಲಿದೆ.