ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗಬಹುದು. ಸಂಗಾತಿಯ ಕೆಲವೊಂದು ಮಾತುಗಳು ಅಸಹನೆ ತಂದೀತು. ಬಹಳ ದಿನಗಳ ನಂತರ ಬಂಧು ಮಿತ್ರರ ಭೇಟಿಯಾಗುವ ಸಂತೋಷವಿರಲಿದೆ. ತಾಳ್ಮೆಯಿರಲಿ.ವೃಷಭ: ಆರೋಗ್ಯ ವಿಚಾರದಲ್ಲಿ ಉದಾಸೀನ ಪ್ರವೃತ್ತಿ ಸಲ್ಲದು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬಡ್ತಿಗಾಗಿ ಮೇಲಧಿಕಾರಿಗಳ ಕೃಪಾಕಟಾಕ್ಷ ಪಡೆಯಲು ಪ್ರಯತ್ನಿಸುವಿರಿ.