ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇಂದು ನಿಮ್ಮ ಪಾಲಿಗೆ ಓಡಾಟದ ದಿನವಾಗಿರಲಿದೆ. ಕೌಟುಂಬಿಕವಾಗಿ ಜವಾಬ್ಧಾರಿಗಳಿಗೆ ಹೆಗಲು ಕೊಡಬೇಕಾಗುತ್ತದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸಂಗಾತಿಯೊಂದಿಗೆ ಸಮಾಧಾನದಿಂದ ವರ್ತಿಸಿ. ತಾಳ್ಮೆಯಿರಲಿ.ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯಾದೀತು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದಿನದ ಮೊದಲಾರ್ಧ ದುಃಖವಿದ್ದರೆ ನಂತರ ನೆಮ್ಮದಿ ಸಿಗಲಿದೆ. ಚಿಂತೆ ಬೇಡ.ಮಿಥುನ: ಕಾರ್ಯರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕೆಳ ಹಂತದ