ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರೋಗ್ಯದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ಮನಸ್ಸಿನಲ್ಲಿರುವ ಅಸಮಾಧಾನವನ್ನು ಸಂಗಾತಿ ಮುಂದೆ ಹೊರಹಾಕಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ತಾಳ್ಮೆಯಿರಲಿ.ವೃಷಭ: ಅನಿರೀಕ್ಷಿತವಾಗಿ ಧನಾದಾಯ ಬರಲಿದ್ದು, ನಿರೀಕ್ಷಿತ ಕೆಲಸಗಳನ್ನು ಪೂರ್ತಿಗೊಳಿಸಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ದೈಹಿಕವಾಗಿಯೂ, ಮಾನಸಿಕವಾಗಿಯೂ ಬಳಲಿದಂತೆ ಅನಿಸಲಿದೆ. ದಾಂಪತ್ಯದಲ್ಲಿ ಸಾಮರಸ್ಯ ಅಗತ್ಯ. ಕೌಟುಂಬಿಕವಾಗಿ ಹೊಸ ನಿರ್ಧಾರಗಳನ್ನು ಕೈಗೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ