ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲಸದ ವಿಚಾರದಲ್ಲಿ ಕೊಂಚವೂ ರಾಜಿಯಿಲ್ಲದ ನಿಮ್ಮ ಗುಣ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಈ ಕ್ಷಣದ ಸಂತೋಷವನ್ನು ಅನುಭವಿಸಿ.ವೃಷಭ: ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರಲಿದೆ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿವೆ.ಮಿಥುನ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ