ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿಶೇಷವಾದ ವ್ಯಕ್ತಿಗಳ ಭೇಟಿಯಿಂದ ನಿಮ್ಮ ದಿನ ವಿಶೇಷವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ತಾಳ್ಮೆಯಿರಲಿ.ವೃಷಭ: ಹೊಸದಾಗಿ ಉದ್ಯೋಗ, ವ್ಯವಹಾರ ಆರಂಭಿಸಿದ್ದರೆ ಮುನ್ನಡೆ ಕಂಡುಬಂದೀತು. ಧಾರ್ಮಿಕ ಮುಖಂಡರ ಆಶೀರ್ವಾದ ಪಡೆಯಲಿದ್ದೀರಿ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ನಿಮ್ಮ ವಾಕ್ಚತುರತೆ ಉಪಯೋಗಕ್ಕೆ ಬರಲಿದೆ.