ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯ ಅಧಿಕಾರಿಗಳೊಂದಿಗೆ ಸಂಯಮದಿಂದ ವರ್ತಿಸಿ. ಮಾತಿನ ಮೇಲೆ ನಿಗಾ ಇರಲಿ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಪಡೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬದವರ ಪ್ರೋತ್ಸಾಹವಿರಲಿದೆ. ನೆರೆಹೊರೆಯವರ ಕಷ್ಟಕ್ಕೆ