ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತ ಧನ ಲಾಭವಾಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ.ವೃಷಭ: ದೂರದ ಮಿತ್ರರ ಭೇಟಿ ಸಂಭವ. ಸಾಂಸಾರಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಯಂತ್ರೋಪಕರಣಗಳೊಂದಿಗೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಪಾಲುದಾರಿಕಾ ವ್ಯವಾಹರದಲ್ಲಿ ಲಾಭ ಕಂಡುಬರುವುದು.ಮಿಥುನ: ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಧನಾರ್ಜನೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.