ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆತ್ಮೀಯರ ಕಷ್ಟದಲ್ಲಿ ಭಾಗಿಯಾಗಲಿದ್ದೀರಿ. ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರಲಿದೆ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ.ವೃಷಭ: ಸಾಮಾಜಿಕ ಕೆಲಸಗಳಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಾಗ ಕೆಲವು ಅಡೆತಡೆಗಳು