ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಷ್ಟೇ ಕಡಿವಾಣ ಹಾಕಿದರೂ ಖರ್ಚು ವೆಚ್ಚಗಳು ಆಗುತ್ತಲೇ ಇರುತ್ತವೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಸಮಯಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದನ್ನು ಕಲಿಯಬೇಕಾಗುತ್ತದೆ.ವೃಷಭ: ವಾಕ್ಚಾತುರ್ಯದಿಂದ ಎಲ್ಲರ ಗಮನಸೆಳೆಯಲಿದ್ದೀರಿ. ವ್ಯಾವಹಾರಿಕವಾಗಿ ಲಾಭ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ವಿವಾಹ ಪ್ರಾಪ್ತಿಯಾಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.ಮಿಥುನ: ಸಂತಾನಾಪೇಕ್ಷಿತ ದಂಪತಿಗಳಿಗೆ ಸದ್ಯದಲ್ಲೇ ಶುಭ ಸೂಚನೆ ಸಿಗಲಿದೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಕಾರ್ಯರಂಗದಲ್ಲಿ