ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮಲ್ಲಿರುವ ಬುದ್ಧಿವಂತಿಕೆಯನ್ನು ಪ್ರದರ್ಶಿಸುವ ಕಾಲ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಕಾರ್ಯರಂಗದಲ್ಲಿ ಹೊಸ ಶತ್ರುಗಳು ಹುಟ್ಟಿಕೊಂಡಾರು. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಇತರರು ನಿಮ್ಮ ಅನುಭವದ ಉಪಯೋಗ ಪಡೆಯಲಿದ್ದಾರೆ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚು ವೆಚ್ಚಗಳಿರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು.ಮಿಥುನ: ಪ್ರೇಮಿಗಳು ಮನಸ್ಸು ಬಿಚ್ಚಿ ಮಾತನಾಡಲು ಅವಕಾಶ ಸಿಗುವುದು. ಸಹೋದರ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ