ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತ ಧನಾಗಮನವಾಗಲಿದ್ದು, ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ನೆನೆಗುದಿಗೆ ಬಿದ್ದಿದ್ದ ಕೆಲಸಕ್ಕೆ ಮರು ಚಾಲನೆ ನೀಡಲಿದ್ದೀರಿ.ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಮುನ್ನಡೆ ಕಂಡುಬರುವುದು. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ಕಂಡುಬಂದೀತು. ಸುಬ್ರಹ್ಮಣ್ಯನ ಪ್ರಾರ್ಥನೆಯಿಂದ ನೆಮ್ಮದಿ ಸಿಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಸಕಾಲದಲ್ಲಿ ಹಣಕಾಸಿನ ನೆರವು ಸಿಗುವುದರಿಂದ ಸಂಭಾವ್ಯ ಸಮಸ್ಯೆಯಿಂದ ಪಾರಾಗಲಿದ್ದೀರಿ.