ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸದಾಗಿ ಆರಂಭಿಸಿದ್ದ ಉದ್ದಿಮೆಗಳಲ್ಲಿ ನಷ್ಟ ಕಂಡುಬಂದೀತು. ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವುದು ಅಗತ್ಯ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಸಂಗಾತಿಯ ಮಾತುಗಳು ನಿಮಗೆ ಸತ್ಯವೆನಿಸಿದರೂ ಕಹಿಯೆನಿಸೀತು.ವೃಷಭ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಪ್ರಸ್ತಾಪಗಳು ಬರಲಿವೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ಎದುರಿಸಬೇಕಾದೀತು.ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾದವರಿಗೆ