ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮಗೆ ಅರಿವಿಗೆ ಬಾರದೇ ನಡೆಯುವ ಘಟನೆಗಳು ನಿಮ್ಮ ಚಿಂತೆಗೆ ಕಾರಣವಾದೀತು. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ನಿಮ್ಮ ಬಹುದಿನಗಳ ಕನಸು ನನಸು ಮಾಡಿಕೊಳ್ಳಲಿದ್ದೀರಿ. ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ತಾಳ್ಮೆಯಿರಲಿ.ಮಿಥುನ: ಕೈಯಲ್ಲಿ ಬೆಣ್ಣೆಯಿಟ್ಟುಕೊಂಡು ತುಪ್ಪಕ್ಕಾಗಿ ಊರೆಲ್ಲಾ ಅಲೆದಾಡುವ ಪರಿಸ್ಥಿತಿ ನಿಮ್ಮದಾದೀತು.