ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಹಠಮಾರೀತನ ಮನೋಭಾವ ಇನ್ನೊಬ್ಬರಿಗೆ ಕಿರಿ ಕಿರಿ ಎನಿಸೀತು. ಅನಗತ್ಯ ಚರ್ಚೆಗೆ ಅವಕಾಶ ಕೊಡದಿರಿ. ಧನ ಗಳಿಕೆಗೆ ನಾನಾ ಮಾರ್ಗಗಳು ಕಂಡುಬಂದೀತು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಮನಸ್ಸಿನಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಲಿದ್ದೀರಿ. ಹಿರಿಯರಿಂದ ಉತ್ತಮ ಸಲಹೆ ಸೂಚನೆ ಸಿಗಲಿದೆ. ಕೋರ್ಟು ಕಚೇರಿ ಕೆಲಸಗಳಲ್ಲಿ ಜಯ.ಮಿಥುನ: ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ.