ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಾಹನ, ಭೂಮಿ ಖರೀದಿ ವಿಚಾರದಲ್ಲಿ ಅಡೆತಡೆಗಳು ಬಂದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ.