ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅನಿರೀಕ್ಷಿತ ಧನಸಂಪತ್ತು ನಿಮ್ಮದಾಗುವುದು. ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಮುನ್ನಡೆಯ ಯೋಗ. ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆ ಪಡೆಯಲಿದ್ದೀರಿ.ವೃಷಭ: ಕೆಲಸ ಕಾರ್ಯಗಳಲ್ಲಿ ಮುನ್ನಡೆಯಿದ್ದರೂ ಮಾನಸಿಕವಾಗಿ ಒಂದು ರೀತಿಯ ಅತೃಪ್ತಿ ಕಂಡುಬಂದೀತು. ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ಮಹಿಳೆಯರಿಂದ ಸಹಾಯ ಪಡೆಯಲಿದ್ದೀರಿ.